ಅಯೋಧ್ಯೆ ರಾಮಮಂದಿರ ಭೂಮಿ ಪೂಜೆ : ನಿಷೇಧಾಜ್ಞೆ
ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರುವುದಕ್ಕೆ ಕ್ಷಣಗಣನೆ ಶುರುವಾಗಿದ್ದು, ಹಲವೆಡೆ ನಿಷೇಧಾಜ್ಞೆ ಜಾರಿಮಾಡಲಾಗಿದೆ.
5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಯಾವುದೇ ಆಯುಧಗಳನ್ನು ಕೊಂಡೊಯ್ಯುವುದು, ಸಭೆ ಮಾಡುವದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.