ಕೊರೋನಾ ಪೀಡಿತರಾದ ಐಶ್ವರ್ಯಾ-ಆರಾಧ್ಯ ಈಗ ಎಲ್ಲಿದ್ದಾರೆ ಗೊತ್ತಾ?

ಸೋಮವಾರ, 13 ಜುಲೈ 2020 (09:49 IST)
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಕುಟುಂಬದವರೆಲ್ಲರೂ ಕೊರೋನಾ ಪೀಡಿತರಾಗಿದ್ದು, ಅವರ ಚೇತರಿಕೆಗಾಗಿ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

 

ಅಮಿತಾಭ್, ಅಭಿಷೇಕ್ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ನಿನ್ನೆಯಷ್ಟೇ ಐಶ್ವರ್ಯಾ ರೈ ಮತ್ತು ಪುತ್ರಿ ಆರಾಧ್ಯಗೂ ಕೊರೋನಾ ಇರುವುದು ದೃಢಪಟ್ಟಿದೆ.

ಐಶ್ವರ್ಯಾ ಹಾಗೂ ಪುತ್ರಿ ಆರಾಧ‍್ಯ ಸದ್ಯಕ್ಕೆ ಆಸ್ಪತ್ರೆಗೆ ದಾಖಲಾಗಿಲ್ಲ. ಬದಲಾಗಿ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ನಲ್ಲಿದ್ದು, ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಅಭಿಷೇಕ್ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ