ಇಂದು ಬೆಳಿಗ್ಗೆ ಘಟನೆ ನಡೆದಿದೆ. ತಮ್ಮದೇ ರಿವಾಲ್ವರ್ ನಿಂದ ತಪ್ಪಾಗಿ ಗುಂಡು ಹಾರಿದ್ದು, ಗೋವಿಂದ ಕಾಲಿಗೆ ಏಟಾಗಿದೆ ಎಂದು ತಿಳಿದುಬಂದಿದೆ. ಬೆಳಿಗ್ಗೆ ಕೋಲ್ಕತ್ತಾಗೆ ಹೊರಡಲು ರೆಡಿಯಾಗುತ್ತಿದ್ದಾಗ ಗೋವಿಂದ ಮನೆಯಲ್ಲಿಯೇ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗುಂಡು ಹೊರತೆಗೆಯಲಾಗಿದೆ. ಇದೀಗ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿದೆ ಎಂದು ಅವರ ಮ್ಯಾನೇಜರ್ ಮಾಹಿತಿ ನೀಡಿದ್ದಾರೆ. ಗೋವಿಂದ ಅವರು ಏರ್ ಪೋರ್ಟ್ ಗೆ ಹೊರಡುವ ವೇಳೆ ಈ ಘಟನೆ ನಡೆದಿದೆ ಎಂದು ಅವರ ಮ್ಯಾನೇಜರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.