ಬಾಂಗ್ಲಾದೇಶದ ರೋಹಿಂಗ್ಯಾ ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿದ ನಟಿ ಪ್ರಿಯಾಂಕಾ ಚೋಪ್ರಾ
ಗುರುವಾರ, 24 ಮೇ 2018 (06:34 IST)
ಮುಂಬೈ : ಮಕ್ಕಳ ಹಕ್ಕುಗಳಿಗಾಗಿ ರಾಷ್ಟ್ರೀಯ ಮತ್ತು ಜಾಗತಿಕ ಯುನಿಸೆಫ್ ಗುಡ್ವಿಲ್ ಅಂಬಾಸಿಡರ್ ಆಗಿರುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಈ ಮೂಲಕ ಬಾಂಗ್ಲಾದೇಶದ ರೋಹಿಂಗ್ಯಾ ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿದ್ದಾರೆ.
ಈ ಬಗ್ಗೆ ನಟಿ ಪ್ರಿಯಾಂಕ ಅವರು ಸೋಮವಾರ ವಿಮಾನದಲ್ಲಿ ಕಿಟಕಿಯ ಹೊರಗೆ ನೋಡುತ್ತಿರುವ ತಮ್ಮ ಪೋಟೋವೊಂದನ್ನು ಪೋಸ್ಟ್ ಮಾಡುವುದರ ಮೂಲಕ ಟ್ವೀಟ್ ಮಾಡಿ,’ ಈ ಯುನಿಸೆಫ್ ಕ್ಷೇತ್ರ ಭೇಟಿಯಲ್ಲಿ ರೋಹಿಂಗ್ಯಾ ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿದಾಗ ನನ್ನ ಅನುಭವಗಳನ್ನು ಹಂಚಿಕೊಳ್ಳಲು ಬುಡಕಟ್ಟು ಜನಾಂಗದ ಮಕ್ಕಳನ್ನು ಭೇಟಿ ಮಾಡಿದೆ, ಅವರ ಜೀವನ ಬಾರೀ ದುರಂತದಲ್ಲಿದೆ. ಜಗತ್ತು ಇವರತ್ತ ಕಾಳಜಿ ವಹಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ