ಎಂಎನ್‌ಎಸ್ ಪ್ರತಿಭಟನೆ ಹಿಂದಕ್ಕೆ: ಏ ದಿಲ್ ಹೈ ಮುಷ್ಕಿಲ್ ಬಿಡುಗಡೆ ವಿವಾದ ಅಂತ್ಯ
ಶನಿವಾರ, 22 ಅಕ್ಟೋಬರ್ 2016 (13:33 IST)
ಚಿತ್ರನಿರ್ಮಾಪಕರ ಸಂಘದ ಅಧ್ಯಕ್ಷ ಮಹೇಶ್ ಭಟ್ ಇಂದು ಮಹಾರಾಷ್ಟ್ರ ಸಿಎಂ ಫಡ್ನವೀಸ್ ಮತ್ತು ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆಯವರನ್ನು ಭೇಟಿ ಮಾಡಿ, ಭವಿಷ್ಯದಲ್ಲಿ ಪಾಕಿಸ್ತಾನ ಕಲಾವಿದರನ್ನು ಬಳಸಿಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದರಿಂದ ವಿವಾದ ಅಂತ್ಯಗೊಂಡಿದೆ.
ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ನಿರ್ಮಿಸಿದ ಏ ದಿಲ್ ಹೈ ಮುಷ್ಕಿಲ್ ಚಿತ್ರದಲ್ಲಿ ಪಾಕಿಸ್ತಾನದ ನಟ ಫವಾದ್ ಖಾನ್ ನಟಿಸುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.
ಚಿತ್ರ ಆರಂಭವಾಗುವ ಮುಂಚೆ ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗೆ ಶೃದ್ಧಾಂಜಲಿ ಅರ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
ಇದಕ್ಕಿಂತ ಮೊದಲು ಚಿತ್ರದ ನಿರ್ಮಾಪಕ ಕರಣ್ ಜೋಹರ್ ಮತ್ತು ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಮುಖ್ಯಮಂತ್ರಿ ಫಡ್ನವೀಸ್ ಅವರನ್ನು ಭೇಟಿ ಮಾಡಿ ಚರ್ಚಿಸಿದ ನಂತರ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಪ್ರತಿಭಟನೆಯನ್ನು ಹಿಂಪಡೆದುಕೊಂಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ