ಆಸ್ಪತ್ರೆಗೆ ದಾಖಲಾದ ಐಶ್ವರ್ಯಾ ರೈ, ಪುತ್ರಿ ಆರಾಧ್ಯ

ಶನಿವಾರ, 18 ಜುಲೈ 2020 (08:54 IST)
ಮುಂಬೈ: ಕೊರೋನಾ ಸೋಂಕಿತರಾದ ಬಾಲಿವುಡ್ ಬೆಡಗಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ‍್ಯ ಬಚ್ಚನ್ ಇದೀಗ ಹೆಚ್ಚಿನ ಚಿಕಿತ್ಸೆಗಾಗಿ  ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

 

ಇಬ್ಬರಿಗೂ ಭಾನುವಾರ ಕೊರೋನಾ ಇರುವುದು ದೃಢಪಟ್ಟಿತ್ತು. ಶನಿವಾರದಿಂದಲೇ ಅಮಿತಾಭ್ ಬಚ್ಚನ್ ಮತ್ತು ಪುತ್ರ ಅಭಿಷೇಕ್ ಬಚ್ಚನ್ ನಾನಾವತಿ ಆಸ್ಪತ್ರೆಗೆ ದಾಖಲಾಗಿ ಕೊರೋನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಐಶ್ವರ್ಯಾ ಮತ್ತು ಪುತ್ರಿಗೆ ಯಾವುದೇ ಲಕ್ಷಣಗಳಿಲ್ಲದೇ ಕೊರೋನಾ ಸೋಂಕು ದೃಢಪಟ್ಟಿದ್ದರಿಂದಲೇ ಮನೆಯಲ್ಲಿಯೇ ಕ್ವಾರಂಟೈನ್ ಗೊಳಗಾಗಿದ್ದರು.

ಇದೀಗ ಇಬ್ಬರಿಗೂ ಸಣ್ಣ ಪ್ರಮಾಣದಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿರುವುದರಿಂದ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರ ಆರೋಗ್ಯ ಸ್ಥಿತಿಯೂ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ