ನಟಿ ಐಶ್ವರ್ಯಾ ರೈಗೆ ಇಡಿ ಸಂಕಷ್ಟ: ವಿಚಾರಣೆಗೆ ಹಾಜರಾಗಲು ಸೂಚನೆ
ತೆರಿಗೆ ವಂಚನೆಗೆ ಸಂಬಂಧಿಸಿದ ಪನಾಮಾ ಪೇಪರ್ಸ್ ಹಗರಣದಲ್ಲಿ ಹಲವು ಖ್ಯಾತ ನಾಮರ ಹೆಸರು ಕೇಳಿಬಂದಿದ್ದು, ಈ ಬಗ್ಗೆ ವಿಚಾರಣೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ತಂಡ ಈಗ ಐಶ್ವರ್ಯಾ ರೈಗೆ ವಿಚಾರಣೆಗೆ ಹಾಜರಾಗಲು ಸೂಚಿಸಿದೆ.
ಈ ಪ್ರಕರಣದಲ್ಲಿ ಐಶ್ವರ್ಯಾ ಮಾವ, ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಹೆಸರೂ ಕೂಡಾ ಕೇಳಿಬಂದಿತ್ತು. ತೆರಿಗೆ ವಂಚಿಸಿ ರಹಸ್ಯವಾಗಿ ವಿದೇಶಗಳಲ್ಲಿ ಹಣ ಹೂಡಿಕೆ ಮಾಡಿರುವ ಹಲವು ಖ್ಯಾತ ನಾಮರ ಹೆಸರುಗಳು ಈ ಪ್ರಕರಣದಲ್ಲಿ ಕೇಳಿಬಂದಿದೆ.