ಸೂಪರ್ ಸ್ಟಾರ್ ಸಲ್ಮಾನ್ ಖಾನ್ ರಿಯೊ ಒಲಿಂಪಿಕ್ಸ್‌ಗೆ ರಾಯಭಾರಿಯಾಗಿ ಆಯ್ಕೆಯಾಗಿರುವುದು ನಿಮ್ಮೆಲ್ಲರಿಗೂ ಗೊತ್ತಿದೆ. ಆದ್ರೆ ಕೆಲವರ ಕಡೆಗಳಿಂದ ಸಲ್ಮಾನ್ ರಾಯಭಾರಿ ಯಾಗಿರುವುದರ ಕುರಿತು ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಮತ್ತೊಂದೆಡೆ ತೀವ್ರ ಆಕ್ಷೇಪಗಳು ಕೇಳಿ ಬರುತ್ತಿವೆ,
ಇದರ ಬೆನ್ನೆಲ್ಲೆ ನಟಿ ಐಶ್ವರ್ಯ ರೈ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗ್ತಿದೆ. ಸಲ್ಮಾನ್‌ರನ್ನು ರಾಯಭಾರಿ ಮಾಡಿರುವುದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಸಲ್ಮಾನ್ ರನ್ನು ತೆಗೆದುಹಾಕುವಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗ್ತಿದೆ.