ಆಸ್ಪತ್ರೆಗೆ ದಾಖಲಾದ ಬಿಗ್ ಬಿ ಅಮಿತಾಭ್ ಬಚ್ಚನ್

ಶುಕ್ರವಾರ, 18 ಅಕ್ಟೋಬರ್ 2019 (09:41 IST)
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಅವರ ಆರೋಗ್ಯದ ಬಗ್ಗೆ ಗಾಬರಿಯಾಗಬೇಕಿಲ್ಲ ಎಂದು ಆಸ್ಪತ್ರೆ ಮೂಲಗಳು ಹೇಳಿವೆ.


ಬಿಗ್ ಬಿ ಅಮಿತಾಭ್ ಬಚ್ಚನ್ ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಅಕ್ಟೋಬರ್ 15 ರಂದೇ ಅಮಿತಾಭ್ ಆಸ್ಪತ್ರೆಗೆ ತೆರಳಿದ್ದರು. ಆದರೆ ಸುದೀರ್ಘ ತಪಾಸಣೆಯ ಕಾರಣದಿಂದ ಇನ್ನೂ ಅವರು ಆಸ್ಪತ್ರೆಯಲ್ಲೇ ಉಳಿದುಕೊಂಡಿದ್ದಾರೆ.

77 ವರ್ಷದ ಅಮಿತಾಭ್ ವಯೋಸಹಜವಾದ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಈ ನಡುವೆಯೂ ತಮ್ಮ ಪತ್ನಿ ಜಯಾ ಬಚ್ಚನ್ ಗೆ ಕರ್ವಾ ಚೌತ್ ಸಂದರ್ಭ ಶುಭ ಕೋರುವುದನ್ನು ಮರೆಯಲಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ