ಶೂಟಿಂಗ್ ವೇಳೆ ಗಾಯಗೊಂಡ ಬಿಗ್ ಬಿ ಅಮಿತಾಭ್ ಬಚ್ಚನ್

ಸೋಮವಾರ, 24 ಅಕ್ಟೋಬರ್ 2022 (09:51 IST)
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಶೂಟಿಂಗ್ ವೇಳೆ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

ಶೂಟಿಂಗ್ ವೇಳೆ ಅವರ ಎಡಗಾಲಿಗೆ ಗಾಯವಾಗಿದ್ದು ತೀವ್ರ ರಕ್ತಸ್ರಾವವಾಗಿದೆ. ತಕ್ಷಣವೇ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಇದೀಗ ಕೆಲವು ದಿನಗಳ ಕಾಲ ಅಮಿತಾಭ್ ಗೆ ವಿಶ‍್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ.

ಇತ್ತೀಚೆಗಷ್ಟೇ ಅಮಿತಾಭ್ ಕೊರೋನಾ ಕಾರಣದಿಂದ ಕೆಲವು ದಿನ ವಿಶ್ರಾಂತಿ ಪಡೆದಿದ್ದರು. ಈಗಷ್ಟೇ ಚೇತರಿಸಿಕೊಂಡು ಶೂಟಿಂಗ್ ಗೆ ಮರಳಿದ್ದರು.


-Edited by Rajesh Patil

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ