ಮುಂಬೈ: ಡ್ರಗ್ ಕೇಸ್ ನಲ್ಲಿ ಸಿಲುಕಿಕೊಂಡಿರುವ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ಇಂದು ವಿಚಾರಣೆಗೆ ಬರಲಿದೆ.
ನಿನ್ನೆ ಎನ್ ಸಿಬಿ ಅಧಿಕಾರಿಗಳು ಆರ್ಯನ್ ನನ್ನು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ಆರ್ಯನ್ ನನ್ನು ನ್ಯಾಯಾಂಗ ವಶಕ್ಕೊಪ್ಪಿಸಿದೆ.
ಈ ನಡುವೆ ಆರ್ಯನ್ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅದು ಇಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಬರಲಿದೆ. ಹೀಗಾಗಿ ಇಂದಿನ ಶುಕ್ರವಾರ ಆರ್ಯನ್ ಪಾಲಿಗೆ ಶುಭವಾಗುತ್ತದೋ ಎಂದು ಕಾದುನೋಡಬೇಕಿದೆ.