ಮೋಹಕ ತಾರೆ ಶ್ರೀದೇವಿಗೆ ಅಂತಿಮ ನಮನ ಸಲ್ಲಿಸಿದ ಬಾಲಿವುಡ್ ನಟ, ನಟಿಯರು

ಬುಧವಾರ, 28 ಫೆಬ್ರವರಿ 2018 (12:55 IST)
ಮುಂಬೈ: ದುಬೈನಲ್ಲಿ ಆಕಸ್ಮಿಕವಾಗಿ ಬಾತ್ ಟಬ್ ನಲ್ಲಿ ಸಾವನ್ನಪ್ಪಿದ ನಟಿ ಶ್ರೀದೇವಿ ಅವರಿಗೆ ಬಾಲಿವುಡ್ ನಟ ,ನಟಿಯರು ಹಾಗೂ ಚಿತ್ರರಂಗದವರು  ಅಂತಿಮ ನಮನ ಸಲ್ಲಿಸಿದ್ದಾರೆ.


ಬೈನ ಲೋಖಂಡ್ವಾಲಾದ ಸೆಲೆಬ್ರೇಷನ್ ಸ್ಪೋರ್ಟ್ಸ್ ಕ್ಲಬ್‍ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಟಿ ಐಶ್ವರ್ಯಾ ರೈ ಬಚ್ಚನ್, ಜಯಾ ಬಚ್ಚನ್, ಜಯಪ್ರದಾ, ತಬು, ಸುಶ್ಮಿತಾ ಸೇನ್, ಮಾಧುರಿ ದೀಕ್ಷಿತ್, ಸೋನಂ ಕಪೂರ್, ಕಾಜೋಲ್, ಅಜಯ್ ದೇವಗನ್ ಮುಂತಾದ ಬಾಲಿವುಡ್ ನಟ, ನಟಿಯರು ಸೇರಿದಂತೆ ಇತರೆ ಗಣ್ಯರು ಹಾಗೂ ಅಭಿಮಾನಿಗಳು ಶ್ರೀದೇವಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.


ಮಧ್ಯಾಹ್ನ  3.30ರ ವೇಳೆಗೆ ವಿಲೆ ಪಾರ್ಲೆ ವೆಸ್ಟ್‍ನಲ್ಲಿ  ಶ್ರೀದೇವಿಯ ಅಂತ್ಯಕ್ರಿಯೆ ನಡೆಯಲಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ