ಈ ಬಗ್ಗೆ ಟ್ವೀಟ್ ಮಾಡಿರುವ ನಟ ಉದಯ್ ಚೋಪ್ರಾ,’ ಮರಿಜುವಾನಾವನ್ನು ಕಾನೂನುಬದ್ಧಗೊಳಿಸಬೇಕು , ಅಲ್ಲದೇ ಅದರ ಮೇಲೆ ತೆರಿಗೆ ವಿಧಿಸುವುದರಿಂದ ಹೆಚ್ಚಿನ ಪ್ರಮಾಣದ ಆದಾಯ ಬರುತ್ತದೆ. ಜೊತೆಗೆ ಹೆಚ್ಚಿನ ಪ್ರಮಾಣದ ವೈದ್ಯಕೀಯ ಅನುಕೂಲವೂ ಆಗಲಿದೆ’ ಎಂದು ಟ್ವೀಟ್ ಮಾಡಿದ್ದಾರೆ.
ಉದಯ್ ಚೋಪ್ರಾ ಅವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಮುಂಬೈ ಪೊಲೀಸರು,’ ದೇಶದ ನಾಗರಿಕರಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ನೀಡುವಾಗ ಹುಷಾರಾಗಿರಿ. 1985ರ ಕಾಯ್ದೆ ಪ್ರಕಾರ ಮರಿಜುವಾನಾ ಸೇವನೆ, ಸಂಗ್ರಹ, ಹಾಗೂ ಮಾರಾಟಕ್ಕೆ ಕಠಿಣ ಶಿಕ್ಷೆಗೊಳಪಡಿಸಲಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.