ಕುಕ್ಕೆಯಲ್ಲಿ ಸರ್ಪ ಸಂಸ್ಕಾರ ಮಾಡಿ, ವಿಶೇಷ ಪೂಜೆ ಸಲ್ಲಿಸಿದ ಬಾಲಿವುಡ್ ನಟಿ ಕತ್ರಿನಾ ಕೈಫ್‌

Sampriya

ಮಂಗಳವಾರ, 11 ಮಾರ್ಚ್ 2025 (19:00 IST)
Photo Courtesy X
ಮಂಗಳೂರು: ಈಚೆಗೆ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಇಂದು ದಕ್ಷಿಣ ಕನ್ನಡದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

ತನ್ನ ಸ್ನೇಹಿತೆಯರೊಂದಿಗೆ ದೇಗುಲಕ್ಕೆ ಭೇಟಿ ನೀಡಿದ ಕತ್ರಿನಾ, ಸರ್ಪ ಸಂಸ್ಕಾರ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮದುವೆಯಾಗದವರು, ಮಕ್ಕಳಾಗದವರು ಹೆಚ್ಚಾಗಿ ಭೇಟಿ ನೀಡುತ್ತಾರೆ. ದೋಷ ನಿವಾರಣೆಗೆ ಅನೇಕರು ಸರ್ಪ ಸಂಸ್ಕಾರ ಪೂಜೆ ನೆರವೇರಿಸುತ್ತಾರೆ. ಇದೀಗ ಬಾಲಿವುಡ್ ನಟಿ ಕತ್ರಿನಾ ಕೂಡ ಸುಬ್ರಹ್ಮಣ್ಯನ ಮೊರೆ ಹೋಗಿದ್ದಾರೆ.

ಮಂಗಳವಾರ ಮತ್ತು ಬುಧವಾರದಂದು ತಲಾ ನಾಲ್ಕರಿಂದ ಐದು ಗಂಟೆಗಳ ಕಾಲ ಎರಡು ಹಂತಗಳಲ್ಲಿ ಪೂಜೆಯನ್ನು ನಡೆಸಲಾಗುತ್ತದೆ.

ದೇವಸ್ಥಾನದ ವಿಐಪಿ ಅತಿಥಿ ಗೃಹದಲ್ಲಿ ಉಳಿದುಕೊಳ್ಳಲಿರುವ ಕತ್ರಿನಾ ಬುಧವಾರ ಮಧ್ಯಾಹ್ನ 2 ಗಂಟೆಯ ವೇಳೆಗೆ ಧಾರ್ಮಿಕ ಕ್ರಿಯೆಯನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ