ಧರ್ಮೇಂದ್ರ ಆರೋಗ್ಯ ಸದ್ಯಕ್ಕೆ ಸ್ಥಿರವಾಗಿದೆಯಂದೂ, ಎರಡು ದಿನಗಳಲ್ಲಿ ಅವರು ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ. ವಿಶೇಷ್ ಅಗರ್ವಾಲ್ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಧರ್ಮೇಂದ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಪರಿಸ್ಥಿತಿ ಸ್ವಲ್ಪ ಗಂಭೀರವಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುತ್ತವೆ ಮೂಲಗಳು.