ನಟ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ

ಗುರುವಾರ, 26 ಸೆಪ್ಟಂಬರ್ 2019 (09:42 IST)
ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಬಂದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


ಸ್ಟೂಡೆಂಟ್ ಆರ್ಗನೈಸೇಷನ್ ಆಫ್ ಪಂಜಾಬ್ ಯೂನಿವರ್ಸಿಟಿ (ಸೋಪು) ಫೇಸ್ ಬುಕ್ ಖಾತೆಯಿಂದ ಕೊಲೆ ಬೆದರಿಕೆ ಬಂದಿದೆ. ಈ ಪೋಸ್ಟ್ ವೈರಲ್ ಆಗಿದ್ದು, ಪೊಲೀಸರು ಇದರ ಬಗ್ಗೆ ವಿಚಾರಣೆ ಆರಂಭಿಸಿದ್ದಾರೆ.

ಕೃಷ್ಣ ಮೃಗ ಭೇಟೆ ಪ್ರಕರಣದಲ್ಲಿ ಕೋರ್ಟ್ ನಲ್ಲಿ ನೀವು ಪಾರಾದರೂ ವೈಷ್ಣೋಯ್ ಸಮಾಜ ಮತ್ತು ಸೋಪು ಪಕ್ಷದಿಂದ ನೀವು ಪಾರಾಗಲು ಸಾಧ‍್ಯವಿಲ್ಲ. ನಮ್ಮ ಪಕ್ಷ ನಿಮಗೆ ಮರಣದಂಡನೆ ವಿಧಿಸಲಿದೆ ಎಂದು ಬೆದರಿಕೆ ಹಾಕಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ