ಬ್ರೇಕಪ್ ವದಂತಿಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಏಕಾಂಗಿಯಾಗಿ ಕಾಣಿಸಿಕೊಂಡ ದೀಪಿಕಾ ಪಡುಕೋಣೆ

ಶುಕ್ರವಾರ, 30 ಸೆಪ್ಟಂಬರ್ 2022 (08:50 IST)
ಮುಂಬೈ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ದಾಂಪತ್ಯದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿಗಳ ಬೆನ್ನಲ್ಲೇ ದೀಪಿಕಾ ವಿಮಾನ ನಿಲ್ದಾಣದಲ್ಲಿ ಏಕಾಂಗಿಯಾಗಿ ಕಾಣಿಸಿಕೊಂಡಿದ್ದಾರೆ.

ದೀಪಿಕಾಗೆ ಅನಾರೋಗ್ಯವಿತ್ತು. ಇದೀಗ ಚೇತರಿಸಿಕೊಂಡಿರುವ ದೀಪಿಕಾ ಕ್ಯಾಮಾರಾ ಕಣ್ಣಿಗೆ ಬಿದ್ದಿದ್ದಾರೆ. ನಗುತ್ತಲೇ ಮಾಧ‍್ಯಮಗಳನ್ನು ಎದುರಿಸಿರುವ ದೀಪಿಕಾ ಏನೂ ಮಾತನಾಡದೇ ಕಾರು ಏರಿ ಹೊರಟಿದ್ದಾರೆ.

ದೀಪಿಕಾ ಮತ್ತು ರಣವೀರ್ 2018 ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಈಗ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿ ಹರಡಿದೆ. ಹೀಗಿದ್ದರೂ ರಣವೀರ್ ಇತ್ತೀಚೆಗೆ ಇದೆಲ್ಲಾ ರೂಮರ್ ಅಷ್ಟೇ ಎಂದು ಪರೋಕ್ಷವಾಗಿ ಹೇಳಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ