ಕೊನೆಗೂ ಬಂತು ಫೊರೆನಿಕ್ಸ್ ವರದಿ; ಹೃದಯಾಘಾತದಿಂದಲೇ ನಟಿ ಶ್ರೀದೇವಿ ಸತ್ತಿದ್ದು!
ಸೋಮವಾರ, 26 ಫೆಬ್ರವರಿ 2018 (15:45 IST)
ಮುಂಬೈ: ದುಬೈನಲ್ಲಿ ಶನಿವಾರ ರಾತ್ರಿ ಮೃತಪಟ್ಟಿರುವ ನಟಿ ಶ್ರೀದೇವಿಯವರು ಹೃದಯಾಘಾತದಿಂದಲೇ ಮೃತಪಟ್ಟಿದ್ದಾರೆ ಎಂದು ದುಬೈನ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಲ್ಲಿ ತಿಳಿಸಲಾಗಿದೆ.
ಮರಣೋತ್ತರ ಪರೀಕ್ಷೆಯ ಬಹುತೇಕ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡಿದೆ. ಮಧ್ಯಾಹ್ನ 2 ಗಂಟೆಯ ವೇಳೆಗೆ ಪೂರ್ಣಗೊಂಡಿದೆ. ನಂತರ ಪಾರ್ಥಿವ ಶರೀರವನ್ನು ಪೊಲೀಸರಿಗೆ ಒಪ್ಪಿಸಿ ಕೆಲವು ದಾಖಲೆಗಳ ತಪಾಸಣೆಯ ನಂತರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು. ಆ ನಂತರ ಶ್ರೀದೇವಿ ಪಾರ್ಥಿವ ಶರೀರವನ್ನು ಭಾರತಕ್ಕೆ ಕರೆತರಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ