ನಟಿ ಕಂಗನಾ ರಾನಾವತ್ ಅವರು ಮುಖಕ್ಕೆ ಪ್ಲಾಸ್ಟಿಕ್ ಮಾಸ್ಕ್ ಹಾಕಿಕೊಂಡು ಫೋಟೋ ಕ್ಲಿಕ್ಕಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ ತಮ್ಮ ಅಭಿಮಾನಿಗಳಿಗೆ ಪ್ಲಾಸ್ಟಿಕ್ ಬಳಸದಂತೆ ಕರೆ ನೀಡಿದ್ದಾರೆ. ಹಾಗೇ ಮುಖಕ್ಕೆ ಮಾಸ್ಕ್ ಹಾಕಿಕೊಂಡಿರುವ ವಿಡಿಯೋವನ್ನು ಕೂಡ ಟ್ವಿಟರ್‌ನಲ್ಲಿ ಶೇರ್ ಮಾಡಿ ‘ನೀವು ಈ ರೀತಿ 10 ಸೆಕೆಂಡ್‌ಗಳವರೆಗೆ ಮಾಸ್ಕ್ ಹಾಕಿ, ಮುಂದಿನ ತಲೆಮಾರಿಗಾಗಿ ನಾವು ಏನು ಮಾಡುತ್ತಿದ್ದೇವೆ ಎಂಬುದನ್ನು ಯೋಚಿಸಿ. ನಾವು ಪಾಸ್ಲಿಕ್ ಬಳಸುವುದನ್ನು ನಿಲ್ಲಿಸದಿದ್ದರೆ, ಮುಂದಿನ ಮೂರು ದಶಕಗಳಲ್ಲಿ ನಮ್ಮ ಸಾಗರಗಳಲ್ಲಿ ಮೀನುಗಳಿಗಿಂತ ಪ್ಲಾಸ್ಟಿಕ್ ವಸ್ತುಗಳೆ ಹೆಚ್ಚಿರುತ್ತವೆ’ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ