ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆ ಹೃತಿಕ್ ರೋಷನ್ ರೊಮ್ಯಾನ್ಸ್?!

ಶುಕ್ರವಾರ, 18 ಅಕ್ಟೋಬರ್ 2019 (09:14 IST)
ಮುಂಬೈ: ವಿರಾಟ್ ಕೊಹ್ಲಿ ಪತ್ನಿ, ನಟಿ ಅನುಷ್ಕಾ ಶರ್ಮಾ ಕೆಲವು ದಿನಗಳ ಬ್ರೇಕ್ ನ ನಂತರ ಹೊಸ ಸಿನಿಮಾವೊಂದನ್ನು ಒಪ್ಪಿಕೊಳ್ಳಲಿದ್ದಾರೆ ಎಂಬ ಸುದ್ದಿಯೊಂದು ಓಡಾಡುತ್ತಿದೆ.


ಅದೂ ಹೃತಿಕ್ ರೋಷನ್ ಜತೆಗೆ ತೆರೆ ಹಂಚಿಕೊಳ್ಳಲಿದ್ದಾರೆ ಎಂಬ ಸುದ್ದಿ ಬಂದಿದೆ. ಫರಾ ಖಾನ್ ನಿರ್ಮಾಣದಲ್ಲಿ ಅಮಿತಾಭ್ ಬಚ್ಚನ್ ಅಭಿನಯದ ಸಟ್ಟೆ ಪೇ ಸಟ್ಟಾ ಸಿನಿಮಾ ಮತ್ತೆ ರಿಮೇಕ್ ಆಗುತ್ತಿದೆ. ಈ ಸಿನಿಮಾದಲ್ಲಿ ಹೃತಿಕ್ ರೋಷನ್ ನಾಯಕಾರುಗುವುದು ಪಕ್ಕಾ ಆಗಿದೆ.

ಆದರೆ ಹೃತಿಕ್ ತೆರೆ ಮೇಲೆ ರೊಮ್ಯಾನ್ಸ್ ಮಾಡಲಿರುವ ನಾಯಕಿ ಯಾರೆಂದು ಫರಾ ಇನ್ನೂ ಘೋಷಣೆ ಮಾಡಿಲ್ಲ. ಆದರೆ ಮೂಲಗಳ ಪ್ರಕಾರ ಅನುಷ್ಕಾ ಶರ್ಮಾ ಇದೇ ಮೊದಲ ಬಾರಿಗೆ ಹೃತಿಕ್ ಗೆ ನಾಯಕಿಯಾಗುತ್ತಿದ್ದಾರೆ ಎನ್ನಲಾಗಿದೆ. ಸದ್ಯದಲ್ಲೇ ಅಧಿಕೃತ ಘೋಷಣೆ ಹೊರಬೀಳಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ