ಕಾಪು ಮಾರಿಯಮ್ಮನ ದೇವಸ್ಥಾನದಲ್ಲಿ ಹಸಿರು ಬಣ್ಣದ ಸೀರೆಯಲ್ಲಿ ಮಹಾಲಕ್ಷ್ಮಿಯಂತೆ ಕಂಡ ಕಂಗನಾ ರಣಾವತ್

Sampriya

ಮಂಗಳವಾರ, 4 ಮಾರ್ಚ್ 2025 (16:01 IST)
Photo Courtesy X
ಮಂಗಳೂರು: ಬಾಲಿವುಡ್ ನಟಿ, ಮಂಡಿ ಸಂಸದೆ ನಟಿ ಕಂಗನಾ ರಣಾವತ್ ಅವರು ದಕ್ಷಿಣ ಕನ್ನಡ ಪವರ್ ಫುಲ್ ದೇವಸ್ಥಾನವಾಗಿರುವ  ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದರು.

ಭೇಟಿ ನೀಡಿದ ಚಿತ್ರಗಳನ್ನು ನಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಕಾಪುವಿನ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಆಶೀರ್ವಾದ ಪಡೆದಿದ್ದೇನೆ ಎಂದು ಕಂಗನಾ ಮಂಗಳವಾರ ಇನ್‌ಸ್ಟಾಗ್ರಾಮ್‌ನಲ್ಲಿ ತಿಳಿಸಿದ್ದಾರೆ.

ಮೊದಲ ಫೋಟೋದಲ್ಲಿ ಕಂಗನಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಕಣ್ಣು ಮುಚ್ಚಿ ಕುಳಿತಿದ್ದರು. ಮತ್ತೊಂದು ಚಿತ್ರದಲ್ಲಿ ಪೂಜೆ ಸಲ್ಲಿಸಿದ ನಂತರ ಅರ್ಚಕರು ಮತ್ತು ದೇವಾಲಯದ ಸಿಬ್ಬಂದಿಯೊಂದಿಗೆ ಮಾರುಕತೆ ನಡೆಸುತ್ತಿರುವುದನ್ನು ಕಾಣಬಹುದು.

ಆಭರಣಗಳ ಜೊತೆಗೆ ಗುಲಾಬಿ ಮತ್ತು ಕೆಂಪು ಸೀರೆಯನ್ನು ಧರಿಸಿ ಸಾಂಪ್ರದಾಯಿಕವಾಗಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

ಕಂಗನಾ ಅವರು ಸೋಮವಾರ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಲವು ಫೋಟೋಗಳನ್ನು ಸೇರಿಸಿದ್ದಾರೆ. ಇಲ್ಲಿಯೂ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದಳು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ