ಸುದೀಪ್ ಸಿನಿಮಾ ನೋಡಲಿದ್ದಾರೆ ಸೂಪರ್ ಸ್ಟಾರ್ ರಜನಿಕಾಂತ್

ಮಂಗಳವಾರ, 16 ಆಗಸ್ಟ್ 2016 (14:46 IST)
ನಟ ಸುದೀಪ್ ಅಭಿನಯದ ಕೋಟಿಗೊಬ್ಬ 2 ಸಿನಿಮಾ ತೆರೆ ಕಂಡಿದೆ. ಎಲ್ಲಾ ಕಡೆಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೇ ತಮಿಳುನಾಡಿನಲ್ಲೂ ಸುದೀಪ್ ಅಭಿನಯವನ್ನು ಕೊಂಡಾಡುತ್ತಿದ್ದಾರೆ ಜನರು. ತಮಿಳು ಹಾಗೂ ಕನ್ನಡದಲ್ಲಿ ತೆರೆ ಕಂಡಿರುವ ಸಿನಿಮಾ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಲ್ಲದೇ ಭರ್ಜರಿ ಕಲೆಕ್ಷನ್ ಕೂಡ ಮಾಡುತ್ತಿದೆ. 
ಕನ್ನಡ ಮಾತ್ರವಲ್ಲದೇ ದಕ್ಷಿಣ ಭಾರತದಲ್ಲೂ ಸುದೀಪ್ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಕಿಚ್ಚ ಸುದೀಪ್ ಅಭಿನಯದ 'ಮುಡಿಂಜ ಇವನ ಪುಡಿ' ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸೀಗುತ್ತಿದೆ. ತಮಿಳುನಾಡಿನ ಅಭಿಮಾನಿಗಳು ಸುದೀಪ್ ಅವರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರಂತೆ.
ಕೆ.ಎಸ್ ರವಿಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸಿನಿಮಾವನ್ನು ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಕೋಟಿಗೊಬ್ಬ-2 ಚಿತ್ರ ವೀಕ್ಷಿಸಲಿದ್ದಾರೆ. ನಾಳೆ ಚೆನ್ನೈನಲ್ಲಿ ಸುದೀಪ್ ಸಿನಿಮಾ ನೋಡಲಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಅವರಿಗಾಗಿಯೇ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ


 
 

ವೆಬ್ದುನಿಯಾವನ್ನು ಓದಿ