ಚಿತ್ರ ಬಿಡುಗಡೆಗೆ ಮುನ್ನವೇ ಉಡ್ತಾ ಪಂಜಾಬ್, ಗ್ರೇಟ್ ಗ್ರ್ಯಾಂಡ್ ಮಸ್ತಿ ಹಾಗೂ ಸುಲ್ತಾನ್ ಚಿತ್ರಗಳು ಲೀಕ್ ಆಗಿದ್ದವು. ಒಬ್ಬ ವ್ಯಕ್ತಿ ಕಷ್ಟ ಪಟ್ಟು ದುಡಿದ ದುಡ್ಡನ್ನು ಮತ್ತೊಬ್ಬ ವ್ಯಕ್ತಿ ದೋಚುತ್ತಾನೆ. ಇದು ಕೆಟ್ಟ ವೃತ್ತಿಯಾಗಿದೆ ಎಂದು ಸಲ್ಮಾನ್ ಖಾನ್ ಸಂದರ್ಶನದ ವೇಳೆ ಹೇಳಿದ್ದಾರೆ.
ಕೆಲ ಕಡೆಗಳಲ್ಲಿ ವಿಕೆಂಡ್‌ನಲ್ಲಿ ಸುಲ್ತಾನ್ ಚಿತ್ರದ ಟಿಕೆಟ್ ದರವನ್ನು ಕಡಿಮೆ ಮಾಡಲಾಗಿದೆ. ಇನ್ನೂ ಸಿಂಗಲ್ ಸ್ಕ್ರೀನ್‌ಗಳಲ್ಲಿ ಟಿಕೆಟ್ ದರವನ್ನು ಹೆಚ್ಚಿಸಲಾಗಿಲ್ಲ ಎಂದು ತಿಳಿಸಿದ ಸಲ್ಮಾನ್ ಖಾನ್, ಕೆಲ ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್ ದರವನ್ನು ಹೆಚ್ಚಿಸಲಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಸಲ್ಮಾನ್ ಖಾನ್ ತಿಳಿಸಿದ್ದಾರೆ.