ದೀಪಾವಳಿ ಆಚರಿಸುವುದರ ಮೂಲಕ ನೆಟ್ಟಿಗರ ಕೋಪಕ್ಕೆ ಕಾರಣರಾದ ಅಮಿತಾಬ್ ಬಚ್ಚನ್

ಭಾನುವಾರ, 11 ನವೆಂಬರ್ 2018 (07:48 IST)
ಮುಂಬೈ : ಬಾಲಿವುಡ್ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಈ ಬಾರಿ ದೀಪಾವಳಿ ಹಬ್ಬದ ಆಚರಣೆಯ ಪೋಟೊ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದಾರೆ.


ಹೌದು. ನಟ ಬಿಗ್ ಬಿಗ್ ತಮ್ಮ ಪತ್ನಿ ಜಯಬಚ್ಚನ್ ಜೊತೆಗೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದು, ಪಟಾಕಿ ಸಿಡಿಸುತ್ತಿರುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಎಲ್ಲರಿಗೂ ದೀಪಾವಳಿ ಹಬ್ಬದ ಶುಭಾಶೇಯ ತಿಳಿಸಿದ್ದಾರೆ.


ಇದು ಈಗ ನೆಟ್ಟಿಗರ ಕೋಪಕ್ಕೆ ಕಾರಣವಾಗಿದ್ದು, ಅಮಿತಾಬ್ ಬಚ್ಚನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ದೇಶಾದ್ಯಂತ ಮಾಲಿನ್ಯ ಹೆಚ್ಚುತ್ತಿದ್ದು, ಪಟಾಕಿ ಸುಡುವುದನ್ನು ಕಡಿಮೆ ಮಾಡಬೇಕು ಎಂಬ ಕೂಗು ಕೇಳಿಬರುತ್ತಿದ್ದರೆ, ದೇಶಕ್ಕೆ , ಯುವಜನರಿಗೆ ಮಾದರಿಯಾಗಬೇಕಿದ್ದ ಬಿಗ್ ಬಿ ಮಾತ್ರ ಪಟಾಕಿ ಹೊಡೆಯುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ