ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ಪ್ರಿಯಾಂಕ ಚೋಪ್ರಾ ದಂಪತಿ
ಪ್ರಿಯಾಂಕ-ನಿಕ್ ದಂಪತಿ ಖುಷಿ ಸುದ್ದಿಯನ್ನು ಹಂಚಿಕೊಂಡಿದ್ದು, ನಾವು ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿದ್ದೇವೆ ಎಂದು ತಿಳಿಸಲು ಸಂತೋಷಿಸುತ್ತೇವೆ. ಈ ಸಂತೋಷದ ಸಂದರ್ಭದಲ್ಲಿ ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ನಂಬಿದ್ದೇವೆ ಎಂದಿದ್ದಾರೆ.
ಪ್ರಿಯಾಂಕ ಗರ್ಭಿಣಿಯಾಗಿದ್ದಾರೆಂದು ಕೆಲವು ದಿನಗಳ ಹಿಂದೆ ಸುದ್ದಿ ಓಡಾಡಿತ್ತು. ಆದರೆ ಈಗ ಬಾಡಿಗೆ ತಾಯ್ತನದ ಮೂಲಕ ಮಗು ಪಡೆದಿರುವ ಸುದ್ದಿ ಬಂದಿದೆ. ಮೂರು ವರ್ಷಗಳ ಹಿಂದೆ ನಿಕ್-ಪ್ರಿಯಾಂಕ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.