ಜೈಲಿನಿಂದ ಹೊರಬಂದ ರಾಜ್ ಕುಂದ್ರಾ

ಮಂಗಳವಾರ, 21 ಸೆಪ್ಟಂಬರ್ 2021 (17:03 IST)
ಮುಂಬೈ: ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಉದ್ಯಮಿ ರಾಜ್ ಕುಂದ್ರಾಗೆ ಜಾಮೀನು ಮಂಜೂರಾಗಿದ್ದು, ಇಂದು ಜೈಲಿನಿಂದ ಹೊರಬಂದಿದ್ದಾರೆ.

Photo Courtesy: Google

ನಿನ್ನೆ ನ್ಯಾಯಾಲಯ 50 ಸಾವಿರ ಶ್ಯೂರಿಟಿ ಬಾಂಡ್ ನೊಂದಿಗೆ ಜಾಮೀನು ಮಂಜೂರು ಮಾಡಿತ್ತು. ಇಂದು ರಾಜ್ ಕುಂದ್ರಾ ಆರ್ಥರ್ ಜೈಲಿನಿಂದ ಹೊರಬಂದಿದ್ದಾರೆ. ಈ ವೇಳೆ ತಮ್ಮನ್ನು ಮುತ್ತಿಕೊಂಡ ಮಾಧ‍್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ಕಾರಿನಲ್ಲಿ ತೆರಳಿದ್ದಾರೆ.

ಇನ್ನು, ರಾಜ್ ಕುಂದ್ರಾ ಸುಮಾರು 119 ಅಶ್ಲೀಲ ವಿಡಿಯೋಗಳನ್ನು ನಿರ್ಮಿಸಿ 9 ಕೋಟಿ ರೂ.ಗಳಿಗೆ ಮಾರಾಟ ಮಾಡಲು ಸಿದ್ಧತೆ ನಡೆಸಿದ್ದರು ಎಂಬ ಅಂಶವನ್ನು ಕ್ರೈಂ ಬ್ರ್ಯಾಂಚ್ ಪೊಲೀಸರು ಬಹಿರಂಗಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ