ಚಿತ್ರದ ಹೊಸ ಪೋಸ್ಟರ್‌ನ್ನು ನಿರ್ಮಾಪಕ ರಿಲೀಸ್ ಮಾಡಿದ್ದಾರೆ. ಈ ಪೋಸ್ಟರ್ ನಲ್ಲಿ ರಜನಿ ಮುಖ ಲಕ್ಷಣಗಳನ್ನು ನೋಡಿದ್ರೆ ಅಚ್ಚರಿ ಮೂಡಿಸುತ್ತೆ. ಯಾಕಂದ್ರೆ ತಲೈವಾ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ, ಡಾನ್ ಆಗಿ ಕೈಯಲ್ಲಿ ರಿವಾಲ್ವರ್ ಹಿಡಿದು ನಿಂತಿರುವ ಪೋಸ್ಟರ್ ಬಿಡುಗಡೆಯಾಗಿತ್ತು.
ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ ಬಹಳಷ್ಟು ಸದ್ದು ಮಾಡಿದೆ. ಪಾ ರಂಜಿತ್ ನಿರ್ದೆಶನದ ರಜನಿಕಾಂತ್ ನಟಿಸಿರುವ ಕಬಾಲಿ ಚಿತ್ರದ ಶೂಟಿಂಗ್ ಮಲೇಷ್ಯಾದಲ್ಲಿ ನಡೆಸಲಾಗಿದೆ. ಇನ್ನೂ ಚಿತ್ರದಲ್ಲಿ ರಾಧಿಕಾ ಅಪ್ಟೆ, ಕಿಶೋರ್, ಕಲೈಯರಸನ್, ಧನಸಿಕಾ ಮತ್ತು ದಿನೇಶ್ ರವಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.