ರಣವೀರ್ ಸಿಂಗ್-ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಸಿನಿಮಾ ಮುಂದಿನ ವರ್ಷ ಬಿಡುಗಡೆ

ಶನಿವಾರ, 12 ನವೆಂಬರ್ 2016 (18:06 IST)
ಮುಂಬೈ: ರಣವೀರ್ ಸಿಂಗ್, ದೀಪಿಕಾ ಪಡುಕೋಣೆ ಮತ್ತು ಶಾಹಿದ್ ಕಪೂರ್ ಅಭಿನಯಸಿರುವ ಸಂಜಯ್ ಲೀಲಾ ಬನ್ಸಾಲಿಯವರ ಐತಿಹಾಸಿಕ ಚಿತ್ರ ಪದ್ಮಾವತಿ ಮುಂದಿನ ವರ್ಷ ನವಂಬರ್ 17 ಕ್ಕೆ ಬಿಡುಗಡೆಯಾಗಲಿದೆ.

ಚಿತ್ರದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಪಾತ್ರ ನಿರ್ವಹಿಸುತ್ತಿರುವ ರಣವೀರ್ ಸಿಂಗ್ ಬಿಡುಗಡೆ ದಿನಾಂಕವನ್ನು ಟ್ವಿಟರ್ ಮೂಲಕ ಬಹಿರಂಗಪಡಿಸಿದ್ದಾರೆ. ಚಿತ್ರದಲ್ಲಿ ತನ್ನ ಲುಕ್ ಇರುವ ರೀತಿಯಲ್ಲೇ ಫೋಟೋ ಸಮೇತ ರೋಮನ್ ಅಂಕೆಯಲ್ಲಿ ದಿನಾಂಕ ಪ್ರಕಟಿಸಿದ್ದಾರೆ.

ಚಿತ್ರದಲ್ಲಿ ರಣವೀರ್ ಕೊಂಚ ನೆಗೆಟಿವ್ ಶೇಡ್ ಇರುವ ಪಾತ್ರ ನಿರ್ವಹಿಸುತ್ತಿದ್ದಾರೆ. ದೀಪಿಕಾ ಪಡುಕೋಣೆ ಪದ್ಮಾವತಿ ಪಾತ್ರ ಮಾಡುತ್ತಿದ್ದು, ಶಾಹಿದ್ ಕಪೂರ್ ಅವರಿಗೆ ಜೋಡಿಯಾಗಿ ಅಭಿನಯಿಸುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ