ಶಾರುಖ್ ಖಾನ್ ಜೊತೆ ತೆರೆ ಹಂಚಿಕೊಂಡ ರಶ್ಮಿಕಾ ಮಂದಣ್ಣ

ಶನಿವಾರ, 5 ಆಗಸ್ಟ್ 2023 (17:36 IST)
Photo Courtesy: Twitter
ಮುಂಬೈ: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಟಾಲಿವುಡ್, ಬಾಲಿವುಡ್ ನಲ್ಲಿ ಬಹುಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದಾರೆ. ಇದೀಗ ಅವರು ಬಾಲಿವುಡ್ ಕಿಂಗ್ ಖಾನ್ ಶಾರುಖ್ ಜೊತೆ ತೆರೆ ಹಂಚಿಕೊಂಡಿದ್ದಾರೆ.

ಆದರೆ ಇದು ಸಿನಿಮಾಗಾಗಿ ಅಲ್ಲ. ಜಾಹೀರಾತೊಂದರಲ್ಲಿ ಶಾರುಖ್ ಖಾನ್ ಜೊತೆ ರಶ್ಮಿಕಾ ಅಭಿನಯಿಸಿದ್ದು, ಮುಂಬೈನ ಯಶ್ ರಾಜ್ ಫಿಲಂಸ್ ಸ್ಟುಡಿಯೋದಲ್ಲಿ ಚಿತ್ರೀಕರಣವೂ ನಡೆದಿದೆ ಎನ್ನಲಾಗಿದೆ.

ಈಗಾಗಲೇ ರಶ್ಮಿಕಾ ವಿಕ್ಕಿ ಕೌಶಲ್ ಜೊತೆ ಜಾಹೀರಾತಿನಲ್ಲಿ ಅಭಿನಯಿಸಿದ್ದರು. ಇದೀಗ ಶಾರುಖ್ ಖಾನ್ ಜೊತೆ ತೆರೆ ಹಂಚಿಕೊಳ‍್ಳುವ ಯೋಗ ಕಿರಿಕ್ ಬೆಡಗಿಯದ್ದಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ