ಬಾಲಿವುಡ್ ನಲ್ಲಿ ರಾವಣನಾಗಿ ಕಾಣಿಸಿಕೊಳ್ಳಲಿದ್ದಾರೆ ರಾಕಿ ಬಾಯ್

ಗುರುವಾರ, 5 ಅಕ್ಟೋಬರ್ 2023 (18:47 IST)
ಬಾಲಿವುಡ್ ನಲ್ಲಿ ರಾಮಾಯಣ ಸಿನಿಮಾದಲ್ಲಿ  ರಾವಣನಾಗಿ  ನಟ ಯಶ್ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ದೊಡ್ಡ ಸುದ್ದಿ ಆಗಿತ್ತು. ಸಾಕಷ್ಟು ಬಾರಿ ಈ ವಿಚಾರ ಮುನ್ನೆಲೆಗೆ ಬಂದರೂ, ಯಶ್ ಮಾತ್ರ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಮಧು ಮಾಂಟೇನ್ ಅವರು ಯಶ್ ಈ ಸಿನಿಮಾದಲ್ಲಿ ಇರಲಿದ್ದಾರೆ ಎಂದು ಈ ಹಿಂದೆಯೇ ಹೇಳಿದ್ದರು. ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದೂ ಮಾತನಾಡಿದ್ದರು. ಅದು ಈಗ ನಿಜವಾದಂತೆ ಕಾಣುತ್ತಿದೆ. ಈಗಾಗಲೇ ಯಶ್ ಲುಕ್ ಟೆಸ್ಟ್ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದ್ದು ಈ ಸಿನಿಮಾಗಾಗಿ ಅವರು ಯಶ್ 15 ದಿನಗಳ ಕಾಲ ಕಾಲ್ ಶೀಟ್ ನೀಡಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ