ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಪ್ರಕರಣ: ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ವಿಚಾರಣೆ

ಸೋಮವಾರ, 6 ಜೂನ್ 2022 (16:32 IST)
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಬಂದ ಹಿನ್ನಲೆಯಲ್ಲಿ ಜೈಲಿನಲ್ಲಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ನನ್ನು ವಿಚಾರಣೆಗೊಳಪಡಿಸಲಾಗುತ್ತಿದೆ.

ಸಲ್ಮಾನ್ ತಂದೆ ಸಲೀಂ ಖಾನ್ ವಾಕಿಂಗ್ ಗೆ ಹೋಗಿದ್ದಾಗ ಅವರಿಗೆ ಸಲ್ಮಾನ್ ಗೆ ಜೀವ ಬೆದರಿಕೆ ಹಾಕಿದ್ದ ಪತ್ರವೊಂದು ಸಿಕ್ಕಿತ್ತು. ತಕ್ಷಣವೇ ಅವರು ಈ ವಿಚಾರವನ್ನು ಪೊಲೀಸರ ಗಮನಕ್ಕೆ ತಂದಿದ್ದರು.

ಮೂಸೆ ವಾಲರಂತೇ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ ಈ ಬೆದರಿಕೆ ಪತ್ರದ ಹಿಂದೆಯೂ ಲಾರೆನ್ಸ್ ಗ್ಯಾಂಗ್ ನ ಪಾತ್ರವಿದೆ ಎಂದು ಶಂಕಿಸಲಾಗಿದೆ. ಈ ಹಿನ್ನಲೆಯಲ್ಲಿ ಆತನನ್ನು ಜೈಲಿನಲ್ಲಿ ವಿಚಾರಣೆಗೊಳಪಡಿಸಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ