ಸಲ್ಮಾನ್ ಖಾನ್ಗೆ ಮತ್ತೆ ಬಂತು ಬೆದರಿಕೆ ಸಂದೇಶ
ನಟ ಸಲ್ಮಾನ್ ಖಾನ್ ಅವರಿಗೆ ಬಿಷ್ಣೋಯ್ ಗ್ಯಾಂಗ್ನಿಂದ ಹೊಸ ಬೆದರಿಕೆ ಬಂದಿದೆ. ಅವರನ್ನು ಕೊಲ್ಲುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆಯ ಪೋಸ್ಟ್ ಹಾಕಲಾಗಿದೆ.
ಸಲ್ಮಾನ್ ಗೆ ಈಗಾಗಲೇ ವೈ ಪ್ಲಸ್ ಭದ್ರತೆ ನೀಡಲಾಗಿದೆ. ದಾವೂದ್ ನಿಮ್ಮನ್ನು ಕಾಪಾಡುತ್ತಾನೆ ಎಂಬ ಭ್ರಮೆ ಬೇಡ. ಯಾರೂ ನಿಮ್ಮನ್ನು ಉಳಿಸಲು ಸಾಧ್ಯವಿಲ್ಲ ಎಂದು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಲಾಗಿದೆ. ಈ ಖಾತೆ ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಇದೆ ಅಂತಾ ಮೂಲಗಳಿಂದ ತಿಳಿದು ಬಂದಿದೆ.