ಮುಂಬೈ : ಬಾಲಿವುಡ್ ನಟ ಸಂಜಯ್ ದತ್ ಅವರ ಜೀವನಾಧಾರಿತ ಚಿತ್ರ ‘ಸಂಜು’ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುವುದರ ಮೂಲಕ ಸಖತ್ ಸೌಂಡ್ ಮಾಡುತ್ತಿದೆ. ಆದರೆ ಇದೀಗ ಈ ಚಿತ್ರದ ಬಗ್ಗೆ ಭೂಗತ ಪಾತಕಿಯೊಬ್ಬ ವಿರೋಧ ವ್ಯಕ್ತಪಡಿಸಿದ್ದಾನೆ.
ಹೌದು, ರಾಜ್ಕುಮಾರ್ ಹಿರಾನಿ ನಿರ್ದೇಶನದ ಬಾಲಿವುಡ್ ನಟ ಸಂಜಯ್ ದತ್ ಅವರ ಜೀವನಾಧಾರಿತ 'ಸಂಜು' ಚಿತ್ರದಲ್ಲಿ ಮುಂಬೈ ಸ್ಪೋಟದ ಕುರಿತಾದ ದೃಶ್ಯಗಳಿದ್ದು, ಈ ಬಗ್ಗೆ ಇದೀಗ ಮುಂಬೈ ಸ್ಫೋಟದ ರೂವಾರಿ ಅಬು ಸಲೀಂನಿಂದ ವಿರೋಧ ವ್ಯಕ್ತವಾಗಿದೆ.
ಆತ ಈ ಚಿತ್ರದಲ್ಲಿ ತನ್ನ ಬಗ್ಗೆ ತಪ್ಪು ಮಾಹಿತಿ ನೀಡಲಾಗಿದೆ. ಇದಕ್ಕೆ ಕೂಡಲೇ ಕ್ಷಮೆ ಕೇಳಬೇಕೆಂದು ಚಿತ್ರ ನಿರ್ದೇಶಕರಿಗೆ ನೋಟಿಸ್ ನೀಡಿದ್ದಾರೆ. ಒಂದು ವೇಳೆ 15 ದಿನಗೊಳಗೆ ಕ್ಷಮೆಯಾಚಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ನೋಟಿಸ್ ಮೂಲಕ ಎಚ್ಚರಿಕೆ ನೀಡಿದ್ದಾನೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ