ಸೈಂಟಿಸ್ಟ್ ಆಗುತ್ತಿದ್ದಾರೆ ನಟಿ ಸಪ್ತಮಿ ಗೌಡ

ಸೋಮವಾರ, 11 ಸೆಪ್ಟಂಬರ್ 2023 (09:00 IST)
ಬೆಂಗಳೂರು: ಕಾಂತಾರ ಖ್ಯಾತಿಯ ನಟಿ ಸಪ್ತಮಿ ಗೌಡ ಈಗ ಬಾಲಿವುಡ್ ಗೆ ಕಾಲಿಟ್ಟಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ಸಪ್ತಮಿ ಪ್ರಮುಖ ಪಾತ್ರ ಮಾಡಿದ್ದಾರೆ.

ಆ ಸಿನಿಮಾದ ಪೋಸ್ಟರ್ ಈಗ ಬಿಡುಗಡೆಯಾಗಿದೆ. ಇದನ್ನು ಗಮನಿಸಿದರೆ ಸಪ್ತಮಿ ಈ ಸಿನಿಮಾದಲ್ಲಿ ವಿಜ್ಞಾನಿಯಾಗಿ ಕಾಣಿಸಿಕೊಂಡಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ.

ಕೊರೋನಾ ಸಮಯದಲ್ಲಿ ವ್ಯಾಕ್ಸಿನ್ ಕಂಡುಹಿಡಿದ ಕತೆ ದಿ ವ್ಯಾಕ್ಸಿನ್ ವಾರ್ ಸಿನಿಮಾದಲ್ಲಿದೆ. ಇದು ನೈಜ ಘಟನೆಯಾಧಾರಿತ ಸಿನಿಮಾ ಎಂದು ಚಿತ್ರತಂಡ ಹೇಳಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ