ಕಿಂಗ್ ಖಾನ್ ಶಾರೂಖ್ ಖಾನ್ ಹಾಗೂ ಆಲಿಯಾ ಅಭಿನಯದ 'ಡಿಯರ್ ಜಿಂದಗಿ 'ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್ ಆಗಿದೆ. ಶಾರೂಖ್ ಖಾನ್ ಜತೆಗೆ ಆಲಿಯಾಳ ಕಾಂಬಿನೇಷನ್ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಇಬ್ಬರ ಕೆಮೆಸ್ಟ್ರಿ ಚಿತ್ರದಲ್ಲಿ ಯಾವ ರೀತಿ ಇರಬಹುದು ಎಂದು ಅಭಿಮಾನಿಗಳು ಕಾತುರರಾಗಿದ್ದಾರೆ. ಈ ಬಗ್ಗೆ ಚಿತ್ರತಂಡ ಬಿಡುಗಡೆಯ ದಿನಾಂಕವನ್ನು ಟ್ವಿಟರ್‌ನಲ್ಲಿ ಘೋಷಣೆ ಮಾಡಿದೆ.