ಶೂಟಿಂಗ್ ವೇಳೆ ಅಪಘಾತ: ಆಸ್ಪತ್ರೆಗೆ ದಾಖಲಾದ ನಟ ಶಾರುಖ್ ಖಾನ್

ಮಂಗಳವಾರ, 4 ಜುಲೈ 2023 (16:11 IST)
ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಶೂಟಿಂಗ್ ವೇಳೆ ಅವಘಡಕ್ಕೀಡಾಗಿದ್ದು ಪೆಟ್ಟು ಮಾಡಿಕೊಂಡು ಆಸ್ಪತ್ರೆಗೆ ಸೇರುವಂತಾಗಿದೆ.

ಅಮೆರಿಕಾದ ಲಾಸ್ ಏಂಜಲೀಸ್ ನಲ್ಲಿ ಶಾರುಖ್ ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರ ಮೂಗಿಗೆ ಏಟಾಗಿದ್ದು ತೀವ್ರ ರಕ್ತಸ್ರಾವವಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಸದ್ಯಕ್ಕೆ ಅವರ ಆರೋಗ್ಯ ಸುಧಾರಿಸಿದೆ. ಯಾವುದೇ ಆತಂಕಪಡುವ ಸ್ಥಿತಿಯಲ್ಲಿಲ್ಲ ಎಂದು ತಿಳಿದುಬಂದಿದೆ. ಇದೀಗ ಅವರು ಮುಂಬೈಗೆ ಮರಳಿದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ