ಅಕಿರಾ ಸಿನಿಮಾ ಸಪ್ಟೆಂಬರ್ ತಿಂಗಳಿನಲ್ಲಿ ರಿಲೀಸ್?

ಗುರುವಾರ, 28 ಏಪ್ರಿಲ್ 2016 (12:07 IST)
ದಾಬಂಗ್ ಚೆಲುವೆ ಸೋನಾಕ್ಷಿ ಸಿನ್ಹಾ ಅವರ ಯಾವುದೇ ಸಿನಿಮಾಗಳು ಕಳೆದ ಒಂದು ವರ್ಷದಲ್ಲಿ ರಿಲೀಸ್ ಆಗಲೇ ಇಲ್ಲ.ಹಾಗಾಗಿ ಸೋನಾಕ್ಷಿ ಸಿನ್ಹಾ ಅವರನ್ನು ಮತ್ತೆ ಯಾವಾಗ ತೆರೆ ಮೇಲೆ ನೋಡ್ತೇವೋ ಅಂತಾ ಅಭಿಮಾನಿಗಳು ಕಾಯುತ್ತಲೇ ಇದ್ದಾರೆ. ಹೀಗಿರುವಾಗಲೇ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ಸಿಕ್ಕಿದೆ.


ಸೋನಾಕ್ಷಿ ಸಿನ್ಹಾ ಅಭಿನಯದ ಅಕಿರ ಸಿನಿಮಾ ಇದೇ ಸಪ್ಟೆಂಬರ್ ನಲ್ಲಿ ರಿಲೀಸ್ ಆಗಲಿದೆಯಂತೆ. ಸಪ್ಟಂಬರ್ 23 ರಂದು ಅಕಿರ ಸಿನಿಮಾ ರಿಲೀಸ್ ಆಗಲಿದೆ ಅಂತಾ ಸಿನಿಮಾ ತಂಡ ಹೇಳಿದೆ.ಅಂದ್ಹಾಗೆ ಅಕಿರ ಸಿನಿಮಾ ಸೋನಾಕ್ಷಿ ಪಾಲಿಗೆ ಅತ್ಯಂತ ಮಹತ್ವದ ಸಿನಿಮಾ.ಇದುವೆರಗೂ ತಾನು ನಿರ್ವಹಿಸದೇ ಇರುವಂತಹ ಪಾತ್ರವನ್ನು ಸೋನಾಕ್ಷಿ ಸಿನ್ಹಾ ಈ ಸಿನಿಮಾದಲ್ಲಿ ಮಾಡಿದ್ದಾರೆ.

ಇನ್ನು ಸಿನಿಮಾದಲ್ಲಿ ಅಭಿನಯಿಸಿದ್ದು ಕೂಡ ನಾನು ಅಚಾನಕ್ಕಾಗಿ ಅಂತಾ ಅವರು ಹೇಳಿದ್ದಾರೆ. ಹಾಗಾಗಿ ವಿಭಿನ್ನವಾದ ಪಾತ್ರದಲ್ಲಿ ಸೋನಾಕ್ಷಿ ಅವರನ್ನು ನೋಡದಕ್ಕಾಗಿ ಅಭಿಮಾನಿಗಳು ಕೂಡ ಕಾತುರದಿಂದ ಕಾಯುತ್ತಿದ್ದಾರೆ.

ಅಕಿರ ಸಿನಿಮಾವನ್ನು ಎ.ಆರ್ ಮುರುಗದಾಸ್ ಅವರು ನಿರ್ದೇಶನ ಮಾಡಿದ್ದಾರೆ.ಇನ್ನು ಸಿನಿಮಾದಲ್ಲಿ ಅಭಿನಯಿಸುತ್ತಾ ನಾನು ಸಾಕಷ್ಟು ವಿಚಾರಗಳನ್ನು ಕಲಿತಿದ್ದೇನೆ ಅಂತಾಸೋನಾಕ್ಷಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ. ಅಭಿಮಾನಿಗಳಂತೂ ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಅಂತಾ ಕಾಯುತ್ತಾ ಕುಳಿತಿದ್ದಾರಂತೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

ವೆಬ್ದುನಿಯಾವನ್ನು ಓದಿ