ತಮ್ಮ ಮುಂದಿನ ಸಿನಿಮಾದಲ್ಲಿ ಹೊಸ ಅವತಾರದಲ್ಲಿ ಶ್ರೀಮುರಳಿ

ಸೋಮವಾರ, 18 ಜುಲೈ 2016 (10:04 IST)
ಉಗ್ರಂ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ತನ್ನ ಸ್ಥಾನವನ್ನು ಭದ್ರವಾಗಿಸಿಕೊಂಡ ನಟ ಶ್ರೀಮುರಳಿ ಈ ಹಿಂದೆ ತೆರೆಕಂಡ ತಮ್ಮ ಎರಡೂ ಸಿನಿಮಾಗಳಲ್ಲಿ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದರು.ಇದೀಗ ತಮ್ಮ ಮುಂದಿನ ಸಿನಿಮಾದಲ್ಲೂ ಮುರಳಿ ಅವರು ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

 
ಶಿವರಾಜ್ ಕುಮಾರ್ ಹಾಗೂ ಶ್ರೀಮುರಳಿ ಅವರು ಜೊತೆಯಾಗಿ ಅಭಿನಯಿಸುತ್ತಿರುವ ಮುಫ್ತಿ ಸಿನಿಮಾದಲ್ಲಿ ಶ್ರೀಮುರಳಿ ಅವರು ವಿಭಿನ್ನವಾಗಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇನ್ನು ಸಿನಿಮಾದ ಬಗ್ಗೆ ಮಾತನಾಡಿರುವ ಶ್ರೀಮುರಳಿ ಅವರು ಶಿವಣ್ಣನ ಜೊತೆ ಇದೇ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರೋದು ನನಗೆ ಸಾಕಷ್ಟು ಖುಷಿ ನೀಡಿದೆ.

ಸಿನಿಮಾಕ್ಕಿಂತ ಸಿನಿಮಾದಲ್ಲಿ ಅವರ ಜೊತೆ ಕೆಲಸ ಮಾಡುವ ಅನುಭವ ಹೇಗಿರುತ್ತೆ ಅನ್ನೋದನ್ನು ನೋಡೋದಕ್ಕೆ ನಾನು ತುಂಬಾನೇ ಕಾತುರನಾಗಿದ್ದೇನೆ ಅಂತಾ ಮುರಳಿ ಹೇಳಿದ್ದಾರೆ.ಅಲ್ಲದೇ ಸಿನಿಮಾ ಎಲ್ಲರಿಗೂ ಇಷ್ಟವಾಗುತ್ತೆ ಅನ್ನೋ ನಂಬಿಕೆ ನನಗಿದೆ ಅಂತಾ ಅವರು ಹೇಳಿದ್ದಾರೆ.
 
ಅಂದ್ಹಾಗೆ ಮುಫ್ತಿ ಸಿನಿಮಾವನ್ನು ನರ್ತನ್ ಅವರು ನಿರ್ದೇಶನ ಮಾಡುತ್ತಿದ್ದಾರೆ.ಈಗಾಗಲೇ ಸಿನಿಮಾದ ಸ್ಕ್ರಿಫ್ಟ್ ಕೆಲಸಗಲು ಮುಗಿದ್ದಿದ್ದು, ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆಯಂತೆ.ಅತೀ ಶೀಘ್ರದಲ್ಲಿ ಸಿನಿಮಾದ ಶೂಟಿಂಗ್ ಆರಂಭವಾಗಲಿದೆಯಂತೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 
 
 
 
 

ವೆಬ್ದುನಿಯಾವನ್ನು ಓದಿ