ಬಡವರ ಕಣ್ಣೀರಿಗೆ ಸ್ಪಂದಿಸಿದ ಸೂಪರ್ ಸ್ಟಾರ್ ಮಹೇಶ್ ಬಾಬು

ಶುಕ್ರವಾರ, 1 ಡಿಸೆಂಬರ್ 2023 (14:00 IST)
ಅನೇಕ ಸೇವಾ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿರುವ ಸೂಪರ್ ಸ್ಟಾರ್ ಮಹೇಶ್ ಬಾಬು ಅವರು ಇದೀಗ ಇತ್ತೀಚೆಗೆ ಮಗುವಿನ ಚಿಕಿತ್ಸೆಗಾಗಿ ಆರ್ಥಿಕ ನೆರವು ನೀಡಿರುವುದು ಬೆಳಕಿಗೆ ಬಂದಿದೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಪ್ರಶಂಸೆಗಳ ಸುರಿಮಳೆಗೈದಿದ್ದಾರೆ ಅಭಿಮಾನಿಗಳು.
 
ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಹುಡುಗಿಯ ಚಿಕಿತ್ಸೆಗಾಗಿ ಹಣದ ಸಹಾಯ ಮಾಡಿದ್ದಾರೆ. ಈ ವಿಚಾರವನ್ನು ನಮ್ರತಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸಿದ್ದು, ಎಲ್ಲರೂ ಮಹೇಶ್ ಬಾಬು ಅವರನ್ನು ನಿಜವಾದ ನಟನೆಂದು ಹೊಗಳಿದ್ದಾರೆ.  
 
ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು ಸಿನಿಮಾದಲ್ಲಿ ಮಾತ್ರ ಹೀರೋ ಅಲ್ಲ ನಿಜ ಜೀವನದಲ್ಲೂ ಕೂಡ ಕಷ್ಟದಲ್ಲಿರುವವರಿಗೆ ತಮ್ಮ ಸಹಾಯ ಹಸ್ತ ನೀಡುತ್ತಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ