ನಟಿ ಶ್ರೀದೇವಿ ಸಾವಿನ ಕುರಿತು ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಭಾನುವಾರ, 13 ಮೇ 2018 (06:48 IST)
ಮುಂಬೈ : ಬಾಲಿವುಡ್ ನ ಖ್ಯಾತ ನಟಿ ಶ್ರೀದೇವಿ ಅವರ ಸಾವಿನ ಕುರಿತು ತನಿಖೆ ನಡೆಸಬೇಕೆಂದು ಕೋರಿ ನಿರ್ಮಾಪಕ ಸುನೀಲ್ ಸಿಂಗ್ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.


ಫೆಬ್ರವರಿ 24 ರಂದು ದುಬೈನ ಹೋಟೆಲ್ ನಲ್ಲಿ ಸಾವನ್ನಪ್ಪಿದ ಬಾಲಿವುಡ್ ನಟಿ ಶ್ರೀದೇವಿ ಅವರ ಸಾವು ಅನುಮಾನಾಸ್ಪದವಾಗಿದ್ದು, ಈ ಕುರಿತು ತನಿಖೆ ನಡೆಸಬೇಕೆಂದು ಕೋರಿ ನಿರ್ಮಾಪಕ ಸುನೀಲ್ ಸಿಂಗ್ ಅವರು ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅಲ್ಲಿ ಅರ್ಜಿ ವಜಾಗೊಂಡಿತ್ತು. ಬಳಿಕ ಅವರು ಸುಪ್ರೀಂ ಕೋರ್ಟ್ ಗೆ ಈ ಬಗ್ಗೆ ಅರ್ಜಿ ಸಲ್ಲಿಸಿದ್ದರು.


ಈ ಅರ್ಜಿಯ ವಿಚಾರಣೆಯನ್ನು ಶುಕ್ರವಾರದಂದು ಕೈಗೆತ್ತಿಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು, ಈ ವಿಚಾರದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವುದಿಲ್ಲವೆಂದು ಹೇಳಿದರಲ್ಲದೇ, ತಮ್ಮ ಆರೋಪ ಸಾಬೀತುಪಡಿಸಲು ಸೂಕ್ತ ದಾಖಲೆಗಳನ್ನು ಸಲ್ಲಿಸಲು ಸುನೀಲ್ ಸಿಂಗ್ ವಿಫಲರಾಗಿದ್ದಾರೆಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ