ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕೇಸ್ : ಸಂಜಯ್ ಲೀಲಾ ಬನ್ಸಾಲಿ ವಿಚಾರಣೆ

ಗುರುವಾರ, 2 ಜುಲೈ 2020 (19:15 IST)
ಬಾಲಿವುಡ್ ನಲ್ಲಿ ಮಿಂಚುತ್ತಿದ್ದ ಯುವ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಯನ್ನು ಮುಂಬೈ ಪೊಲೀಸರು ವಿಚಾರಣೆ ಗುರಿಪಡಿಸಿದ್ದಾರೆನ್ನಲಾಗುತ್ತಿದೆ.

ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿಲ್ಲ. ಅದೊಂದು ಕೊಲೆ ಎಂದು ಅಭಿಮಾನಿಗಳು ಆರೋಪ ಮಾಡುತ್ತಿದ್ದಾರೆ.

ಹೀಗಾಗಿ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದು, ಹೇಳಿಕೆಗಳನ್ನು ದಾಖಲು ಮಾಡಿಕೊಳ್ಳುತ್ತಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ