ಅಡ್ಡಾದಿಡ್ಡಿ ಕಾರು ಚಲಾಯಿಸಿ ಆಟೋಗೆ ಡಿಕ್ಕಿ ಹೊಡೆದ ತಮಿಳಿನ ಸ್ಟಾರ್ ನಟನ ಪುತ್ರ

ಸೋಮವಾರ, 13 ಆಗಸ್ಟ್ 2018 (07:32 IST)
ಚೆನ್ನೈ : ತಮಿಳಿನ ಸ್ಟಾರ್ ನಟ ವಿಕ್ರಮ್ ಪುತ್ರ ಧ್ರುವ್ ಅಡ್ಡಾದಿಡ್ಡಿ ಕಾರು ಚಲಾಯಿಸಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.


ನಟ ಧ್ರುವ್ ತನ್ನ ಮೂವರು ಸ್ನೇಹತರ ಜೊತೆ ಕಾರಿನಲ್ಲಿ ಪ್ರಯಾಣ ಮಾಡುತ್ತಿರುವಾಗ, ಅತಿವೇಗದಿಂದ ಕಾರು ಚಲಾಯಿಸಿದ ಪರಿಣಾಮ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಮೂರು ಆಟೋಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಮೂರು ಆಟೋಗಳು ಸಂಪೂರ್ಣ ಜಖಂ ಆಗಿದ್ದು, ಓರ್ವ ಗಾಯಗೊಂಡಿದ್ದಾನೆ. ಗಾಯಗೊಂಡವರನ್ನು ಸ್ಥಳೀಯ ರೋಯಾಪಟ್ಟ ಆಸ್ಪತ್ರೆಗೆ ದಾಖಲಿಸಲಾಗಿದೆ.


ಧ್ರುವ ವಿಕ್ರಮ್ ಪೊಲೀಸರ ಜತೆ ವಾಗ್ವಾದ ಬೆಳೆಸಿದ್ದು,  ಈತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತನ ವಿರುದ್ಧ ಐಪಿಸಿ ಸೆಕ್ಷನ್ 279 (ನಿರ್ಲಕ್ಷ ಚಾಲನೆ), 337 ಅಡಿ ದೂರು ದಾಖಲಿಸಿದ್ದಾರೆ. ಸದ್ಯ ಧ್ರುವ ವಿಕ್ರಮ್ ಜಾಮೀನು ಪಡೆದು ಬಿಡುಗಡೆಯಾಗಿದ್ದಾನೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ