ತಮಿಳು ಬಿಗ್ ಬಾಸ್ ಮನೆಯಲ್ಲಿ ಅವಘಡ ; ಎರಡನೇ ಪ್ಲೋರ್ ನಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು

ಭಾನುವಾರ, 9 ಸೆಪ್ಟಂಬರ್ 2018 (07:12 IST)
ಚೆನ್ನೈ : ನಟ ಕಮಲ್ ಹಾಸನ್ ಅವರ  ನಿರೂಪಣೆಯಲ್ಲಿ ಮೂಡಿಬರುತ್ತಿರುವ ತಮಿಳು ಬಿಗ್ ಬಾಸ್ ಮನೆಯಲ್ಲಿ ಅವಘಡವೊಂದು ಸಂಭವಿಸಿದೆ.


ತಮಿಳು ಬಿಗ್ ಬಾಸ್ ಮನೆಯ ಎರಡನೇ ಪ್ಲೋರ್ ನಿಂದ ವ್ಯಕ್ತಿಯೊಬ್ಬ ಕೆಳಗೆ ಬಿದ್ದು ಸಾವನಪ್ಪಿದ್ದಾನೆ. ಸಾವನಪ್ಪಿದ ವ್ಯಕ್ತಿ ಗುಣಶೇಖರನ್​​ ವೃತ್ತಿಯಲ್ಲಿ ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಎಂಬುದಾಗಿ ತಿಳಿದುಬಂದಿದೆ.


ತಕ್ಷಣ  ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆತ ಮರಣ ಹೊಂದಿದ್ದಾನೆ. ಈ  ಘಟನೆ ಕುರಿತು ನಜರತ್​ಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಾರಂಭವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ