ದಿ ಕೇರಳ ಸ್ಟೋರಿ ನಟಿ ಅದಾ ಶರ್ಮಾಗೆ ಅನಾರೋಗ್ಯ
ಆಹಾರದಲ್ಲಿನ ವ್ಯತ್ಯಾಸದಿಂದಾಗಿ ಅವರಿಗೆ ಅನಾರೋಗ್ಯವಾಗಿದೆ. ಅವರಿಗೆ ಅತಿಸಾರ ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.
ಅದಾ ಶರ್ಮಾ ತಮ್ಮ ಮುಂದಿನ ಕಮಾಂಡೋ ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾಗಬೇಕಿತ್ತು. ಈ ಸಿನಿಮಾದಲ್ಲಿ ಅವರು ಖಡಕ್ ಪೊಲೀಸ್ ಅಧಿಕಾರಿಯ ಪಾತ್ರ ಮಾಡಲಿದ್ದಾರೆ. ಆದರೆ ಅನಾರೋಗ್ಯದಿಂದಾಗಿ ಚಿತ್ರೀಕರಣಕ್ಕೆ ಅಡ್ಡಿಯಾಗಿದೆ.