ಬಾಕ್ಸ್ ಆಫೀಸ್​​ನಲ್ಲಿ ‘ಜೈಲರ್’ ಸದ್ದು

ಶನಿವಾರ, 12 ಆಗಸ್ಟ್ 2023 (15:00 IST)
ರಜನಿಕಾಂತ್ ನಟನೆಯ ‘ಜೈಲರ್’ ಸಿನಿಮಾ ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ. ಮೊದಲ ದಿನ ಹಲವು ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಂಡಿದೆ. ತಮಿಳುನಾಡು ಮಾತ್ರವಲ್ಲದೆ ಕರ್ನಾಟಕ, ಆಂಧ್ರ, ತೆಲಂಗಾಣದಲ್ಲೂ ಸಿನಿಮಾಗೆ ಮೆಚ್ಚುಗೆ ಸಿಕ್ಕಿದೆ. ಹೀಗಾಗಿ ಮೊದಲ ದಿನ ಈ ಚಿತ್ರ ಭರ್ಜರಿ ಕಲೆಕ್ಷನ್ ಮಾಡಿದೆ. ತಮಿಳುನಾಡು ಒಂದರಲ್ಲೇ ‘ಜೈಲರ್’ 23 ಕೋಟಿ ರೂಪಾಯಿ ಗಳಿಕೆ ಮಾಡಿದೆ.. ಮುಂದಿನ ದಿನಗಳಲ್ಲಿ ಸಿನಿಮಾ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ‘ಜೈಲರ್’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿತ್ತು. ಈ ನಿರೀಕ್ಷೆಯನ್ನು ಮೀರಿ ಸಿನಿಮಾ ಮೂಡಿ ಬಂದಿದೆ. ‘ಜೈಲರ್’ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ ಮೊದಲ ದಿನ 72 ಕೋಟಿ ರೂಪಾಯಿ ಗಳಿಕೆ ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ