ಸಲ್ಮಾನ್ ಖಾನ್ ಹುಟ್ಟುಹಬ್ಬಕ್ಕೆ ಕಿಚ್ಚ ಸುದೀಪ್ ಶುಭಾಶಯ ಕೋರಿದ ರೀತಿ ಇದು
ಬುಧವಾರ, 27 ಡಿಸೆಂಬರ್ 2023 (11:37 IST)
ಬೆಂಗಳೂರು: ಇಂದು ಬಾಲಿವುಡ್ ನಟ ಸಲ್ಮಾನ್ ಖಾನ್ ಜನ್ಮದಿನ. ಈ ವಿಶೇಷ ದಿನಕ್ಕೆ ಅವರಿಗೆ ಆತ್ಮೀಯವಾಗಿರುವ ನಟ ಕಿಚ್ಚ ಸುದೀಪ್ ವಿಶೇಷವಾಗಿಯೇ ವಿಶ್ ಮಾಡಿದ್ದಾರೆ.
ಸಲ್ಮಾನ್ ಖಾನ್ ಜೊತೆಗೆ ಸುದೀಪ್ ದಬಾಂಗ್ ಸಿನಿಮಾದಲ್ಲಿ ಅಭಿನಯಿಸಿದ್ದರು. ಇದಾದ ಬಳಿಕ ಇಬ್ಬರ ನಡುವಿನ ಬಾಂಧವ್ಯ ಇನ್ನಷ್ಟು ಗಟ್ಟಿಯಾಗಿದೆ. ಸಲ್ಮಾನ್ ರನ್ನು ಸುದೀಪ್ ತನ್ನ ಹಿರಿಯ ಅಣ್ಣನಂತೇ ನೋಡುತ್ತಾರೆ.
ಇದೀಗ ಸಲ್ಮಾನ್ ಹುಟ್ಟುಹಬ್ಬಕ್ಕೆ ಸುದೀಪ್ ಸೋಷಿಯಲ್ ಮೀಡಿಯಾ ಖಾತೆ ಎಕ್ಸ್ ಮೂಲಕ ವಿಶ್ ಮಾಡಿದ್ದಾರೆ. ನನ್ನ ಪ್ರೀತಿಯ ಸರ್ ಮತ್ತು ಅಣ್ಣನ ಸಮಾನ ಸಲ್ಮಾನ್ ಖಾನ್ ಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಜೊತೆ ಕಳೆದ ಪ್ರತಿಯೊಂದು ಕ್ಷಣವೂ ಅವಿಸ್ಮರಣೀಯ. ನಮ್ಮ ಜೀವನದಲ್ಲಿ ವಿಶೇಷ ವ್ಯಕ್ತಿಯಾಗಿ ಎಲ್ಲರನ್ನೂ ಪ್ರೀತಿಸುವ ವ್ಯಕ್ತಿಯಾಗಿ ಜೊತೆಯಾಗಿರುವುದಕ್ಕೆ ಧನ್ಯವಾದಗಳು. ಹ್ಯಾಪೀ ರಿಟರ್ನ್ಸ್ ಎಂದು ಸುದೀಪ್ ವಿಶ್ ಮಾಡಿದ್ದಾರೆ.
ಸಲ್ಮಾನ್ ಖಾನ್ ಇಂದು 58 ನೇ ಜನ್ಮದಿನಕ್ಕೆ ಕಾಲಿಡುತ್ತಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಸಿನಿ ತಾರೆಯರು, ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ ಶುಭ ಕೋರುತ್ತಿದ್ದಾರೆ.