ಹೈದರಾಬಾದ್ : ಟಾಲಿವುಡ್ ನಟ ಬಾಲಕೃಷ್ಣ ಅವರು ಅಭಿಮಾನಿಗಳನ್ನು ಹೊಡೆದು ಕಾಲಿನಲ್ಲಿ ಒದ್ದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ನಟ, ರಾಜಕಾರಣಿ ಬಾಲಕೃಷ್ಣ ಅವರು ಇತ್ತೀಚಿಗೆ ತೆಲಂಗಾಣದ ಕಮ್ಮಮ್ ಜಿಲ್ಲೆಯಲ್ಲಿ ರಾಜಕೀಯ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಅಭಿಮಾನಿಗಳು ಬಾಲಯ್ಯ ಪ್ರಯಾಣಿಸುತ್ತಿದ್ದ ಕಾರು ನಿಲ್ಲಿಸಲು ಯತ್ನಿಸಿದ್ದರಂತೆ. ಇದರಿಂದ ಕೋಪಗೊಂಡ ಬಾಲಯ್ಯ, ಕಾರಿನಿಂದಿಳಿದು ಕೆಲ ಅಭಿಮಾನಿಗಳಿಗೆ ಹೊಡೆದಿದ್ದಷ್ಟೆ ಅಲ್ಲದೇ, ಕಾಲಿನಿಂದ ಒದ್ದಿದ್ದಾರೆ. ಆದಕಾರಣ ಬಾಲಯ್ಯ ಕ್ಷಮೆ ಕೇಳಬೇಕೆಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.
ಈ ಹಿಂದೆ ಕೂಡ ಇವರು ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದ ಅಭಿಮಾನಿಗೆ ಕಪಾಳಮೋಕ್ಷ ಮಾಡಿದ್ದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.