Manoj Kumar: ಬಾಲಿವುಡ್ ಹಿರಿಯ ನಟ ಮನೋಜ್ ಕುಮಾರ್ ಇನ್ನಿಲ್ಲ

Krishnaveni K

ಶುಕ್ರವಾರ, 4 ಏಪ್ರಿಲ್ 2025 (09:38 IST)
Photo Credit: X
ಮುಂಬೈ: ಬಾಲಿವುಡ್ ಹಿರಿಯ ನಟ, ನಿರ್ದೇಶಕ ಮನೋಜ್ ಕುಮಾರ್ ಇನ್ನಿಲ್ಲ. ಅವರಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಅವರು ಸಾವನ್ನಪ್ಪಿದ್ದಾರೆ.

ಅವರ ಸಾವಿಗೆ ಬಾಲಿವುಡ್ ಮಂದಿ, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಮನೋಜ್ ಕುಮಾರ್ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳಿಂದ ಅವರನ್ನು ಮುಂಬೈನ ಕೋಕಿಲಾಬೆನ್ ಧೀರೂಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಇಂದು ಮುಂಜಾನೆ 3.30 ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ. ರಾಷ್ಟ್ರಪ್ರಶಸ್ತಿ, ದಾದಾ ಸಾಹೇಬ್ ಫಾಲ್ಕೆ ಅವಾರ್ಡ್, ಪದ್ಮಶ್ರೀ ಪ್ರಶಸ್ತಿಗಳು ಅವರಿಗೆ ಸಂದಿದ್ದವು. ಅವರ ನಿರ್ದೇಶನದ ಉಪ್ಕಾರ್ ಸಿನಿಮಾಗೆ ರಾಷ್ಟ್ರಪ್ರಶಸ್ತಿ ಸಿಕ್ಕಿದೆ.

ಪಂಜಾಬ್ ಮೂಲದವರಾದ ಮನೋಜ್ ಕುಮಾರ್ 1957 ರಲ್ಲಿ ಮೊದಲ ಬಾರಿಗೆ ಬಣ್ಣದ ಲೋಕಕ್ಕೆ ಕಾಲಿಟ್ಟರು. ಕ್ರಾಂತಿ, ಶೋರ್, ಜೈ ಹಿಂದ್ ಮುಂತಾದ ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದರು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ