ಯಶ್ ಹತ್ಯೆಯ ಸಂಚಿನ ಸುದ್ದಿ ಕುರಿತು ಪೊಲೀಸ್ ಅಧಿಕಾರಿಗಳು ಹೇಳಿದ್ದೇನು?

ಶುಕ್ರವಾರ, 13 ಜುಲೈ 2018 (07:20 IST)
ಬೆಂಗಳೂರು : ಕುಖ್ಯಾತ ರೌಡಿ ಸೈಕಲ್ ರವಿ ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರ  ಹತ್ಯೆಗೆ ಸಂಚು ರೂಪಿಸಿದ್ದ ಎಂಬ ವಿಚಾರ ಈಗಾಗಲೇ ಕಾಡ್ಗಿಚ್ಚಿನಂತೆ ಹರಡಿತ್ತು. ಆದರೆ ಈ ಬಗ್ಗೆ ಪೊಲೀಸ್ ಅಧಿಕಾರಿಗಳು  ಬೇರೆ ರೀತಿನೇ ಹೇಳುತ್ತಿದ್ದಾರೆ.

ಹೌದು. ಜೂನ್ 27ರಂದು ಸಿಸಿಬಿ ಪೊಲೀಸರ ಗುಂಡೇಟು ತಿಂದು ಬಂಧನಕ್ಕೊಳಗಾಗಿರುವ ಸೈಕಲ್ ರವಿ ವಿಚಾರಣೆಯ ವೇಳೆ 2ವರ್ಷಗಳ ಹಿಂದೆ ಸ್ಯಾಂಡಲ್ ವುಡ್ ನ ಖ್ಯಾತ ನಟ ರಾಕಿಂಗ್ ಸ್ಟಾರ್ ಯಶ್ ಅವರ ಹತ್ಯೆಗೆ ಸಂಚು ರೂಪಿಸಲಾಗಿತ್ತು. ರೌಡಿ ಕೋದಂಡ ಎಂಬಾತ ಈ ವಿಚಾರದಲ್ಲಿ ಆಸಕ್ತಿ ವಹಿಸಿದ್ದನೆಂದು ತಿಳಿಸಿದ್ದಾನೆ ಎಂಬ ಸುದ್ದಿ ಹಬ್ಬಿತ್ತು. ಇದು ಅಭಿಮಾನಿಗಳಲ್ಲಿ ಆತಂಕವನ್ನುಂಟು ಮಾಡಿತ್ತು.

 

ಆದರೆ ಈ ಸುದ್ದಿ ಸುಳ್ಳು ಎಂದು ಹಿರಿಯ ಪೊಲೀಸ್ ಅಧಿಕಾರಿ ಸತೀಶ್ ಕುಮಾರ್ ಅವರು ಹೇಳಿದ್ದಾರೆ. ಯಶ್ ಹತ್ಯೆ ಸಂಚು ಸುಳ್ಳು ಸುದ್ದಿ. ಹಾಗೇನಾದರೂ ಇದ್ದರೆ ನಾವೇ ತಿಳಿಸುತ್ತೇವೆ ಎಂದು ಅವರು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ