ಸಮಾರಂಭವೊಂದರಲ್ಲಿ ದೀಪಿಕಾ ಪಡುಕೋಣೆ ಅವರು ಕಣ್ಣೀರು ಹಾಕಿದ್ದು ಯಾಕೆ…?
ಗುರುವಾರ, 1 ಫೆಬ್ರವರಿ 2018 (05:41 IST)
ದೆಹಲಿ : ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಕಣ್ಣೀರು ಹಾಕಿದ ಘಟನೆ ನಡೆದಿದೆ.
ದೀಪಿಕಾ ಪಡುಕೋಣೆ ಅವರ ತಂದೆ ಪ್ರಕಾಶ್ ಪಡುಕೋಣೆ ಅವರಿಗೆ ಈ ಬಾರಿಯ ಭಾರತೀಯ ಬ್ಯಾಡ್ಮಿಂಟನ್ ಅಸೋಸಿಯೇಶನ್ ನೀಡುವ ಲೈಫ್ ಟೈಮ್ ಅಚೀವ್ ಮೆಂಟ್ ಅವಾರ್ಡ್ ಲಭಿಸಿತ್ತು. ಈ ಪ್ರಶಸ್ತಿಯನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರಕಾಶ್ ಪಡುಕೋಣೆ ಅವರಿಗೆ ನೀಡಿ ಗೌರವಿಸಿದ್ದಾರೆ. ದೆಹಲಿಯಲ್ಲಿ ನಡೆದ ಈ ಸಮಾರಂಭಕ್ಕೆ ತಾಯಿ ಉಜ್ಜಲಾ ಹಾಗು ಸಹೋದರಿ ಅನಿಶಾ ಜೊತೆ ದೀಪಿಕಾ ಅವರು ಪಾಲ್ಗೊಂಡಿದ್ದು ಪ್ರಶಸ್ತಿ ಪಡೆದ ತಂದೆಯನ್ನು ಕಂಡು ಒಂದು ಕ್ಷಣ ದೀಪಿಕಾ ಅವರು ಭಾವುಕರಾದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ